Udayavani News Paper Cutting:
ನಿರುದ್ಯೋಗಿ ಯುವಕ/ ಯುವತಿಯರು, ಶಾಲಾ- ಕಾಲೇಜುಗಳಿಂದ ಹೊರಗುಳಿದವರು, ಎಂಜಿನಿಯರಿಂಗ್ ಹಾಗೂ ಇತರೆ ಪದವಿಯ ಅಂತಿಮ ವರ್ಷದ ವಿದ್ಯಾರ್ಥಿಗಳು ಉದ್ಯೋಗ ಪಡೆಯಲು ಅನುಕೂಲವಾಗುವಂತೆ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕೌಶಲ್ಯ ವಿಕಾಸ ಯೋಜನೆಯಡಿ ಕೌಶಲ್ಯ ತರಬೇತಿ ಸೌಲಭ್ಯ ಕಲ್ಪಿಸಲಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದರು.
ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ವಿದ್ಯಾವಂತ ಯುವಕ/ ಯುವತಿಯರು ಹಾಗೂ ಶಾಲಾ- ಕಾಲೇಜು ಶಿಕ್ಷಣದಿಂದ ಹೊರಗುಳಿದವರು ಕೌಶಲ್ಯ ತರಬೇತಿ ಪಡೆದು ಉದ್ಯೋಗ ಪಡೆಯಲು ಅನುಕುಲವಾಗುವಂತೆ ಉದ್ಯೋಗ ಕೇಂದ್ರಿತವಾಗಿ ಯೋಜನೆ ಜಾರಿಯಾಗಿದ್ದು, ಯುವಜನತೆ ಸದ್ಬಳಕೆ ಮಾಡಿಕೊಳ್ಳಬೇಕಿದೆ ಎಂದು ತಿಳಿಸಿದರು.
Vijayavani News Paper Cutting: